
ಉಡುಪಿ ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಾನ್ಯ ಗೃಹ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ನಡೆಯಿತು.
ಸಭೆಯಲ್ಲಿ ಜಿಲ್ಲೆಯಲ್ಲಿ ಕೋರೋನಾ ವೈರಸ್ ಸಕ್ರಿಯ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಕೋರೋನಾ ವೈರಸ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಕುರಿತು ಚರ್ಚಿಸಲಾಯಿತು.
ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಮಾತನಾಡಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ ಅಯಾ ಕಾಲೇಜಿನ ವಿದ್ಯಾರ್ಥಿಗೆ ಆಯಾ ಕಾಲೇಜನಲ್ಲಿಯೇ ಲಸಿಕೆ ನೀಡಬೇಕು ಜೊತೆಗೆ ಹೊರ ರಾಜ್ಯದ ಅಥವಾ ಹೊರ ಜಿಲ್ಲೆಯಿಂದ ಬಂದ ವಿಧ್ಯಾರ್ಥಿಗಳಿಗೆ ಪ್ರತ್ಯೇಕ ಲಸಿಕಾ ಕೇಂದ್ರ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನೀಲ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಜಿಲ್ಲಾ ಅರಣ್ಯಾಧಿಕಾರಿಗಳಾದ ಆಶಿಶ್ ರೆಡ್ಡಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.